ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆಯಷ್ಟೇ ಬೆಂಗಳೂರಿನಲ್ಲಿ ನಡೆದ ಡೆಲ್ಲಿ Vs ಆರ್‌ಸಿಬಿ ಮ್ಯಾಚ್‌ನ ಟಿಕೆಟ್ಸ್ ಕಾಳಸಂತೆಯಲ್ಲಿ ಮಾರಾಟ ಆಗಿದೆ. ಕೌಂಟರ್‌ನಲ್ಲಿ ನಿಂತು ಟಿಕೆಟ್ ಪಡೆದ ಕೆಲವರು ನಂತರ ಹೆಚ್ಚು ರೇಟ್‌ಗೆ ಟಿಕೆಟ್ ಬ್ಲಾಕ್‌ನಲ್ಲಿ ಮಾರಾಟ ಮಾಡಿದ್ದಾರೆ. ಈ ಸಂಬಂಧ ಸಿಸಿಬಿ ಪೊಲೀಸರು ಎಂಟು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಮುತ್ತ, ಕಬ್ಬನ್ ಪಾರ್ಕ್ ಒಳಗೆ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.
ಮಫ್ತಿಯಲ್ಲಿ ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಒಪ್ಪಿಸಿದರು. ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರನ್ನು ವಿಚಾರಣೆ ಮಾಡಲಾಗುತ್ತಿದೆ.