ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ನ ಮೊದಲ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿದ ಆರ್ಸಿಬಿ ಈ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಿದೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 175 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆರ್ಸಿಬಿ ಇನ್ನು 22 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಗೆಲುವು ಸಾಧಿಸಿದೆ.
ಆರ್ಸಿಬಿಯ ಈ ಸುಲಭದ ಗೆಲುವಿನಲ್ಲಿ ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ ಮತ್ತು ನೂತನ ನಾಯಕ ರಜತ ಪಾಟಿದಾರ್ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಮೂವರೂ ಆಟಗಾರರು ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಪಂದ್ಯವನ್ನು ಭರ್ಜರಿಯಾಗಿ ಗೆಲ್ಲಿಸಿದ್ದಾರೆ. ಆರ್ಸಿಬಿಯ ಈ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸಿದ್ದು ಈ ಸಲ ಕಪ್ ನಮ್ದೇ ಅನ್ನೋ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ.