May 21, 2026
Thursday, May 21, 2026
spot_img

ಆರ್‌ಸಿಬಿ ಪ್ಲೇಆಫ್‌ ಹಾದಿಗೆ ಆನೆ ಬಲ: ಸ್ಟಾರ್ ಬ್ಯಾಟರ್ ರೀ-ಎಂಟ್ರಿ ಖಚಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ ಮಹತ್ವದ ಘಟ್ಟಕ್ಕೆ ತಲುಪಿದೆ. ಪ್ರಸ್ತುತ 65 ಪಂದ್ಯಗಳು ಮುಕ್ತಾಯಗೊಂಡಿದ್ದು, ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಅಂಕಗಳೊಂದಿಗೆ ರಾಜ ಗಾಂಭೀರ್ಯದಿಂದ ಅಗ್ರಸ್ಥಾನ ಕಾಯ್ದುಕೊಂಡಿದೆ. ಈ ಭರ್ಜರಿ ಪ್ರದರ್ಶನದೊಂದಿಗೆ ಆರ್‌ಸಿಬಿ ಪ್ಲೇಆಫ್‌ನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಆಡುವುದು ಬಹುತೇಕ ಖಚಿತವಾಗಿದೆ.

ಅಗ್ರಸ್ಥಾನದ ಸಂಭ್ರಮದಲ್ಲಿರುವ ಆರ್‌ಸಿಬಿ ಅಭಿಮಾನಿಗಳಿಗೆ ಇದೀಗ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದು, ಪ್ಲೇಆಫ್ ಹಂತದ ಪಂದ್ಯಗಳಿಗೂ ಮುನ್ನವೇ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಕಳೆದ ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ತೀವ್ರ ಪೆಟ್ಟಾಗಿತ್ತು. ಚಿಕಿತ್ಸೆ ಮತ್ತು ವಿಶ್ರಾಂತಿಗಾಗಿ ಇಂಗ್ಲೆಂಡ್‌ಗೆ ಮರಳಿದ್ದ ಅವರು, ಇದೀಗ ಸಂಪೂರ್ಣ ಫಿಟ್ ಆಗಿದ್ದಾರೆ. ಮೇ 26 ಕ್ಕೂ ಮುನ್ನವೇ ಫಿಲ್ ಸಾಲ್ಟ್ ಆರ್‌ಸಿಬಿ ಕ್ಯಾಂಪ್ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಆರ್‌ಸಿಬಿಗೆ ಆನೆ ಬಲ ತಂದ ಸಾಲ್ಟ್ ರೀ-ಎಂಟ್ರಿ

ಐಪಿಎಲ್ 2026ರ ಮೊದಲಾರ್ಧದಲ್ಲಿ ಆರ್‌ಸಿಬಿ ಪರ ಕಣಕ್ಕಿಳಿದಿದ್ದ ಫಿಲ್ ಸಾಲ್ಟ್ ಕೇವಲ 6 ಪಂದ್ಯಗಳಲ್ಲಿ 2 ಭರ್ಜರಿ ಅರ್ಧಶತಕಗಳ ನೆರವಿನಿಂದ 206 ರನ್ ಬಾರಿಸಿ ಅಬ್ಬರಿಸಿದ್ದರು. ಪ್ಲೇಆಫ್‌ನಂತಹ ಹೈ-ವೋಲ್ಟೇಜ್ ಪಂದ್ಯಗಳಿಗೂ ಮುನ್ನ ಇವರ ಆಗಮನವು ಬೆಂಗಳೂರು ತಂಡದ ಬ್ಯಾಟಿಂಗ್ ಬಲವನ್ನು ದುಪ್ಪಟ್ಟುಗೊಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !