ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2025 ರ 70 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇತಿಹಾಸ ನಿರ್ಮಿಸಿದೆ. ಟಾಪ್ 2 ನಿರ್ಧರಿಸುವ ನಿರ್ಣಾಯಕ ಹಾಗೂ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಮೋಘ ಆಟವಾಡಿ 6 ವಿಕೆಟ್ಗಳ ರೋಚಕ ಗೆಲುವು ಸಾಧಿಸಿದೆ.
ಲಖನೌ ಸೂಪರ್ ಜೈಂಟ್ಸ್ (LSG) ನೀಡಿದ 228 ರನ್ಗಳ ಬೃಹತ್ ಗುರಿಯನ್ನ ಬೆನ್ನಟ್ಟಿದ ಆರ್‌ಸಿಬಿ 18.4 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಈ ಗೆಲುವಿನೊಂದಿಗೆ ಆರ್‌ಸಿಬಿ ಲೀಗ್ನಲ್ಲಿ 9ನೇ ಗೆಲುವು ಪಡೆದು ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆದುಕೊಂಡಿತು.
228 ರನ್ ಟಾರ್ಗೆಟ್ ಪಡೆದ ಆರ್‌ಸಿಬಿ ಉತ್ತಮ ಆರಂಭ ಪಡೆಯಿತು. ಫಿಲಿಪ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಜೊತೆ ಮೊದಲ ವಿಕೆಟ್‌ಗೆ 61 ರನ್ ಜೊತೆಯಾಟ ನೀಡಿದರು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಸಾಲ್ಟ್ 19 ಎಸೆತದಲ್ಲಿ 30 ರನ್ ಸಿಡಿಸಿದರು.
ಫಿಲ್ ಸಾಲ್ಟ್ 19 ಎಸೆತಗಳಲ್ಲಿ 6 ಬೌಂಡರಿಗಳ ಸಹಿತ 30 ರನ್ಗಳಿಸಿ ಔಟ್ ಆದರು. ನಂತರ ಬಂದ ರಜತ್ ಪಾಟೀದಾರ್ 7 ಎಸೆತಗಳಲ್ಲಿ ತಲಾ 1 ಬೌಂಡರಿ, 1 ಸಿಕ್ಸರ್ ಸಹಿತ 13 ರನ್ಗಳಿಸಿ ಓರೂರ್ಕ್ ಬೌಲಿಂಗ್ನಲ್ಲಿ ಸಮದ್ಗೆ ಕ್ಯಾಚ್ ನೀಡಿ ಮತ್ತೊಮ್ಮೆ ವೈಫಲ್ಯ ಅನುಭವಿಸಿದರು.
ಮಯಾಂಕ್ ಅಗರ್ವಾಲ್ ಹಾಗೂ ಜಿತೇಶ್ ಶರ್ಮಾ ಜೊತೆಯಾಟ ಆರ್‌ಸಿಬಿ ಪಂದ್ಯದ ಗತಿ ಬದಲಿಸಿತು. ಸ್ಫೋಟಕ ಬ್ಯಾಟಿಂಗ್ ಮೂಲಕ ಆರ್‌ಸಿಬಿ ರನ್ ಕಲೆಹಾಕಿತು. ಇವರಿಬ್ಬರು ಕೇವಲ 45 ಎಸೆತಗಳಲ್ಲಿ ಅಜೇಯ 107 ರನ್ಗಳಿಸಿ ತಂಡವನ್ನ ಇನ್ನು 8 ಎಸೆತಗಳಿರುವಂತೆ ಗೆಲುವಿನ ಗಡಿ ದಾಟಿಸಿದರು.