ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಆಡಿದ 12 ಪಂದ್ಯಗಳಲ್ಲಿ ಆರ್‌ಸಿಬಿ 8 ಗೆಲುವು, 3 ಸೋಲು ಹಾಗೂ ಒಂದು ರದ್ದಾದ ಪಂದ್ಯ ಸೇರಿದಂತೆ 17 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.
ಚೊಚ್ಚಲ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿರುವ ಆರ್‌ಸಿಬಿ ತಂಡವು ಪ್ಲೇ ಆಫ್‌ಗಾಗಿ ಹೊಸ ರಣತಂತ್ರ ಹೆಣೆದಿದ್ದು, ಜಿಂಬಾಬ್ವೆ ಮೂಲದ ನೀಳಕಾಯದ ವೇಗಿ ಬ್ಲೆಸ್ಸಿಂಗ್ ಮುಜರಬಾನಿಯನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿದೆ.
ಆರ್‌ಸಿಬಿ ತಂಡದಲ್ಲಿ ದಕ್ಷಿಣ ಆಫ್ರಿಕಾ ಮೂಲದ ವೇಗಿ ಲುಂಗಿ ಎಂಗಿಡಿ ಇದೇ ಮೇ 26ಕ್ಕೆ ತವರಿಗೆ ವಾಪಾಸ್ಸಾಗಲಿದ್ದಾರೆ. ಹೀಗಾಗಿ ಆರ್‌ಸಿಬಿ, ಜಿಂಬಾಬ್ವೆ ವೇಗಿ ಬ್ಲೆಸ್ಸಿಂಗ್ ಮುಜರಬಾನಿ ಅವರನ್ನು ತಾತ್ಕಾಲಿಕವಾಗಿ ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ.