ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಇನ್ನೂ ಬಿಸಿಯೇರಿರುವ ನಡುವೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾರಾಟ ಮಾಡಲು ಅದರ ಮಾಲೀಕ ಸಂಸ್ಥೆ ಡಿಯಾಜಿಯೊ ಮುಂದಾಗಿದೆ ಎಂಬ ಸುದ್ದಿ ಹೆಚ್ಚು ಸದ್ದು ಮಾಡುತ್ತಿದೆ.
ಮೂಲಗಳ ಮಾಹಿತಿ ಪ್ರಕಾರ, ಆರ್ಸಿಬಿಯಲ್ಲಿ ಹೂಡಿಕೆ ಮಾಡಿರುವ ತನ್ನ ಪಾಲನ್ನು ಮಾರಾಟ ಮಾಡಲು ಡಿಯಾಜಿಯೊ ಮುಂದಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಸುದ್ದಿ ಆರ್ಸಿಬಿ ಅಭಿಮಾನಿಗಳಿಗೆ ಬಿಸಿತುಪ್ಪವಾಗಿದೆ.
ಬ್ಲೂಮ್ಬರ್ಗ್ ಮಾಡಿರುವ ವರದಿಯಲ್ಲಿ ಈ ವಿಚಾರ ಪ್ರಸ್ತಾಪವಾಗಿದ್ದು, ಡಿಯಾಜಿಯೊ ಪ್ರೈವೆಟ್ ಲಿಮಿಟೆಡ್ ಕಂಪನಿ ಆರ್ಸಿಬಿಯಲ್ಲಿ ಹೂಡಿಕೆ ಮಾಡಿರುವ ತನ್ನ ಪಾಲನ್ನು ಮಾರಾಟ ಮಾಡಲು ಮಾತುಕತೆ ನಡೆಸುತ್ತಿರುವುದಾಗಿ ಹೇಳಿದೆ. ಆದರೆ ಈ ಬಗ್ಗೆ ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ