April 24, 2026
Friday, April 24, 2026
spot_img

RCB vs GT ಹೈ-ವೋಲ್ಟೇಜ್ ಕದನ: ಟಾಸ್ ಗೆದ್ದ ಪಾಟಿದಾರ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ 2026ರ 34 ನೇ ರೋಚಕ ಹಣಾಹಣಿಯಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿವೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಟಿದಾರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ಮೊದಲು ಬ್ಯಾಟಿಂಗ್ ನಡೆಸಿ ಬೃಹತ್ ಮೊತ್ತ ಪೇರಿಸುವ ಗುರಿ ಹೊಂದಿದೆ.

ಈ ಪಂದ್ಯವು ಉಭಯ ತಂಡಗಳಿಗೂ ಅತ್ಯಂತ ನಿರ್ಣಾಯಕವಾಗಿದೆ. ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿರುವ ಆರ್‌ಸಿಬಿ, ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಟಾಪ್-2 ಸ್ಥಾನಕ್ಕೇರುವ ಸುವರ್ಣ ಅವಕಾಶ ಹೊಂದಿದೆ. ಮತ್ತೊಂದೆಡೆ, ಕಳೆದ ಕೆಲವು ಪಂದ್ಯಗಳಲ್ಲಿ ಮಿಶ್ರ ಫಲಿತಾಂಶ ಕಂಡಿರುವ ಗುಜರಾತ್ ಟೈಟಾನ್ಸ್ ತಂಡವು ಗೆಲುವಿನ ಲಯಕ್ಕೆ ಮರಳಿ ಟಾಪ್-5 ಪ್ರವೇಶಿಸಲು ಹೋರಾಡುತ್ತಿದೆ.

ತವರಿನ ಪ್ರೇಕ್ಷಕರ ಬೆಂಬಲದೊಂದಿಗೆ ಕಣಕ್ಕಿಳಿಯುತ್ತಿರುವ ಆರ್‌ಸಿಬಿ, ಚಿನ್ನಸ್ವಾಮಿ ಮೈದಾನದ ಸಣ್ಣ ಬೌಂಡರಿಗಳ ಲಾಭ ಪಡೆಯಲು ಸನ್ನದ್ಧವಾಗಿದೆ. ಬೌಲಿಂಗ್‌ನಲ್ಲಿ ಶಿಸ್ತು ಪ್ರದರ್ಶಿಸಿ ಜಿಟಿ ಬ್ಯಾಟರ್‌ಗಳನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವುದು ಪಟಿದಾರ್ ಪಡೆಯ ಪ್ಲಾನ್ ಆಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !