RCB VS MI ಹೈವೋಲ್ಟೇಜ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣ ತಲುಪಿದ ಬಾಂಬ್ ಸ್ಕ್ವಾಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮೇಶ್ವರಂ ಕೆಫೆ ಸ್ಪೋಟ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೈ ಅಲರ್ಟ್ ಆಗಿದ್ದು, ಹೆಚ್ಚು ಜನ ಸೇರುವ ಸ್ಥಳಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ.

ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್‌ಸಿಬಿ ನಡುವಣ ಹೈ ವೋಲ್ಟೇಜ್ ಪಂದ್ಯ ನಡೆಯಲಿದ್ದು, ಬಾಂಬ್ ಸ್ಕ್ವಾಡ್ ಈಗಾಗಲೇ ಸ್ಟೇಡಿಯಂ ತಲುಪಿ ಪರಿಶೀಲನೆ ನಡೆಸುತ್ತಿದೆ.

35 ಸಾವಿರ ಆಸನ ಸಾಮರ್ಥ್ಯವಿರುವ ಸ್ಟೇಡಿಂನ ಮೂಲೆ ಮೂಲೆಯನ್ನು ಬಿಡದೆ ಪರಿಶೀಲನೆ ನಡೆಸಲಾಗುತ್ತಿದೆ. ಇದರ ಜೊತೆಗೆ ಕಬ್ಬನ್ ಪಾರ್ಕ್, ಎಂಜಿ ರೋಡ್ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲೂ ತಪಾಸಣೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!