ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2025 ರ ಪ್ರಶಸ್ತಿ ಪಂದ್ಯಕ್ಕೆ ಸಿದ್ಧವಾಗಿವೆ. ಎರಡೂ ತಂಡಗಳು ಬಹಳ ಸಮಯದ ನಂತರ ಫೈನಲ್ ತಲುಪಿದ್ದು, ಇಲ್ಲಿಯವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲವಾದ್ದರಿಂದ ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಅದು ಅವರ ಚೊಚ್ಚಲ ಐಪಿಎಲ್ ಪ್ರಶಸ್ತಿಯಾಗಲಿದೆ.
ಟಾಸ್ ಗೆದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.