ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನ ಐಪಿಎಲ್ 2024ರ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಇದು ನಾಕೌಟ್ ಪಂದ್ಯವಾಗಿದ್ದು, ಸೋತ ತಂಡ ನೇರವಾಗಿ ಐಪಿಎಲ್ ನಿಂದ ಹೊರಬೀಳಲಿದೆ. ವಿಜೇತ ತಂಡ ಎರಡನೇ ಕ್ವಾಲಿಫೈಯರ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಮೇ 26 ರಂದು ಫೈನಲ್ ನಡೆಯಲಿದೆ.
ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.