ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಇಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್ಗೆ ಪ್ರವೇಶಿಸಿದರೆ, ಸೋಲುವ ತಂಡ ಐಪಿಎಲ್ನಿಂದ ಹೊರಬೀಳಲಿದೆ. ಹೀಗಾಗಿ ಉಭಯ ತಂಡಗಳಿಗೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಎರಡೂ ತಂಡಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ.
ಆರ್ಸಿಬಿ ಮತ್ತು ಆರ್ಆರ್ ಈವರೆಗೆ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.