ಹೊಸದಿಗಂತ ಡಿಜಿಟಲ್ ಡೆಸ್ಕ್:
17 ವರ್ಷಗಳ ಬಳಿಕ ಚೆನ್ನೈ ಕ್ರೀಡಾಂಗಣದಲ್ಲಿ ಆರ್‌ಸಿಬಿ ಗೆಲುವಿನ ನಗೆ ಬೀರಿದೆ. ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 50 ರನ್ ಗೆಲುವು ಸಾಧಿಸಿತು.
ಆರ್‌ಸಿಬಿಯ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆಯೇ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ವಾಸವಾಗಿರುವ ಆರ್‌ಸಿಬಿ ಮಾಜಿ ಮಾಲೀಕ ವಿಜಯ್ ಮಲ್ಯ ಸೋಷಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಭಾರತದ ಬದ್ದ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಅವರದ್ದೇ ನೆಲದಲ್ಲಿ 17 ವರ್ಷಗಳ ಬಳಿಕ ಅಧಿಕಾರಯುತ ಗೆಲುವು ಸಾಧಿಸಿದ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಬ್ಯಾಟ್ ಹಾಗೂ ಬಾಲ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ್ದೀರ. ದಿಟ್ಟವಾಗಿ ಆಡಿ ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.