ರಷ್ಯಾ ಅಧ್ಯಕ್ಷರಾಗಿ ಮತ್ತೊಮ್ಮೆ ಆಯ್ಕೆ: ಪುಟಿನ್‌ ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾ ಅಧ್ಯಕ್ಷರಾಗಿ ಮತ್ತೊಮ್ಮೆ ಆಯ್ಕೆಯಾಗಿರುವ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

ರಷ್ಯಾದ ಒಕ್ಕೂಟದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಕ್ಕಾಗಿ ಪ್ರಧಾನಿ, ಪುಟಿನ್‌ ಅವರನ್ನು ಅಭಿನಂದಿಸಿದರು ಮತ್ತು ರಷ್ಯಾದ ಸ್ನೇಹಪರ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ವೇಳೆ ಭಾರತ-ರಷ್ಯಾ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಾಯಕರು ಒಪ್ಪಿಕೊಂಡಿದ್ದಾರೆ. ಅದರೊಂದಿಗೆ ದ್ವಿಪಕ್ಷೀಯ ಸಹಕಾರದಲ್ಲಿ ಪ್ರಗತಿಯನ್ನೂ ಭವಿಷ್ಯದ ದಿನಗಳಲ್ಲಿ ಪರಿಶೀಲನೆ ಮಾಡುವುದಾಗಿ ಒಪ್ಪಿಕೊಂಡಿದ್ದು, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಕೂಡ ಮಾಡಿಕೊಳ್ಳಲಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷವನ್ನು ಕೊನೆ ಮಾಡುವ ನಿಟ್ಟಿನಲ್ಲಿ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮುಂದಿರುವ ದಾರಿ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನಗಳನ್ನು ಮಾಡಲು ಉಭಯ ನಾಯಕರು ಒಪ್ಪಿಕೊಂಡಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷದ ಕುರಿತು ಚರ್ಚಿಸುವಾಗ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ಸ್ಥಿರವಾದ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದರು. ಅದರೊಂದಿಗೆ ಮುಂದಿನ ದಿನಗಳಲ್ಲಿ ಸಂಪರ್ಕದಲ್ಲಿರುವುದಾಗಿ ಒಪ್ಪಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!