NOTA ಬಹುಮತ ಪಡೆದರೆ ಮರು ಚುನಾವಣೆ: ಆಯೋಗದ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾರ್ವತ್ರಿಕ ಚುನಾವಣೆಗಳಲ್ಲಿ ನೋಟ ಬಹುಮತ ಪಡೆದರೆ ಆ ಭಾಗದಲ್ಲಿ ಮರು ಚುನಾವಣೆ ನಡೆಸಲು ಆದೇಶಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಅಭಿಪ್ರಾಯ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ.

ಲೇಖಕ ಶಿವ್ ಖೇರಾ ಎಂಬವರು ಸುಪ್ರೀಂ ಕೋರ್ಟ್‌ನಲ್ಲಿ ಈ ಅರ್ಜಿ ಸಲ್ಲಿಸಿದ್ದಾರೆ. ಅವರ ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ವಂಡಿಸಿದ ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಈ ಬಗ್ಗೆ ಚುನಾವಣಾ ಅಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ನೋಟಾಕ್ಕಿಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ಐದು ವರ್ಷಗಳ ಅವಧಿಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಪೂರಕ ನಿಯಮ ರೂಪಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆಯೂ ಈ ಪಿಐಎಲ್ ಕೋರಿದೆ.

ಈ ಪಿಐಎಲ್ ಚುನಾವಣಾ ಪ್ರಕ್ರಿಯೆ ಕುರಿತ ವಿಷಯ. ಆಯೋಗ ಏನು ಹೇಳುತ್ತದೆ ನೋಡೋಣ ಎಂದು ಪೀಠ ಅಭಿಪ್ರಾಯಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!