ನಾಳೆ ಪುನೀತ್ ರಾಜ್ ಕುಮಾರ್ ನಟನೆಯ ಜಾಕಿ ಸಿನಿಮಾ ರೀ ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ (Puneeth Rajkumar) ಜನ್ಮದಿನ. ಈ ಹಿನ್ನೆಲೆ ನಾಳೆ ( ಶುಕ್ರವಾರ) ಅಪ್ಪು ನಟನೆಯ ಜಾಕಿ (Jackie) ಸಿನಿಮಾ ರೀ ರಿಲೀಸ್ ಆಗುತ್ತಿದೆ. ಅದಕ್ಕಾಗಿ ಅನೇಕ ಚಿತ್ರಮಂದಿರಗಳು ಸಿದ್ಧತೆ ಮಾಡಿಕೊಂಡಿವೆ.

ದುನಿಯಾ ಸೂರಿ (Duniya Vijay) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಚಿತ್ರ ಎಂದು ದಾಖಲಾಗಿದೆ. ಅಲ್ಲದೇ, ಈ ಸಿನಿಮಾದ ಹಾಡುಗಳು ಕೂಡ ಹೊಸ ರೀತಿಯಲ್ಲಿ ಕೇಳಿಸಿದ್ದವು. ಹಾಗಾಗಿ ಅಪ್ಪು ಡಾನ್ಸ್ ಕೂಡ ಅಭಿಮಾನಿಗಳಿಗೆ ಇಷ್ಟವಾಗಿತ್ತು.

ವಿಚಿತ್ರ ವೇಷಗಳನ್ನೂ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಹಾಕಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಅಪ್ಪು ಜೊತೆ ಭಾವನಾ ನಾಯಕಿಯಾಗಿ ನಟಿಸಿದ್ದರು.

ಜಾಕಿ ಚಿತ್ರವನ್ನು ಮತ್ತಷ್ಟು ಅಪ್ ಗ್ರೇಡ್ ಮಾಡಿ ಈ ಬಾರಿ ಥಿಯೇಟರ್ ಗೆ ತರಲಾಗುತ್ತಿದೆ. ಸೌಂಡ್, ರೆಸ್ಯುಲೇಷನ್ ಮತ್ತಷ್ಟು ಹೆಚ್ಚಿಸಲಾಗಿದೆಯಂತೆ. ಇನ್ನಷ್ಟು ಕಲರ್ ಫುಲ್ ನೊಂದಿಗೆ ಜಾಕಿ ಸಿನಿಮಾವನ್ನು ನೋಡಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!