ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುತ್ತಿದ್ದು, ಅನೇಕ ಪ್ರಮುಖ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.
ಈಗಾಗಲೇ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ, ರಾಜ್ಯ ಖಾತೆ ಸಚಿವ ಸಂಜಯ್ ದಾಹೊತ್ರಾ, ಕಾರ್ಮಿಕ ಸಚಿವ ಸಂತೋಷ್ ಗಂಗಾವರ್, ತಾವರ್ಚಂದ್ ಗೆಹ್ಲೋಟ್ ಸಹಿತ 11 ಸದಸ್ಯರು ರಾಜೀನಾಮೆ ನೀಡಿದ್ದಾರೆ.
ಇದೀಗ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೂಡ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಹೊಸದಾಗಿ 43 ಮಂದಿ ಕೇಂದ್ರ ಸಚಿವ ಸಂಪುಟ ಸೇರಿಕೊಳ್ಳುತ್ತಿದ್ದಾರೆ.