Wednesday, July 6, 2022

Latest Posts

ಹಲಾಲ್ ಕಟ್ ತಡೆಯೋ ತಾಕತ್ತು ಮುಖ್ಯಮಂತ್ರಿಗಳಿಗಿದೆಯಾ? ಇದು ಕಿಡಿಗೇಡಿಗಳು ಎಬ್ಬಿಸಿರೋ ವಿವಾದ ಎಂದ್ರು ಕುಮಾರಸ್ವಾಮಿ

ಹೊಸದಿಗಂತ ವರದಿ, ರಾಮನಗರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಾಕತ್ತಿದ್ದರೆ ಹಲಾಲ್‌ ಕಟ್‌ ತಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ ಸವಾಲೆಸೆದಿದ್ದಾರೆ.
ರಾಜ್ಯದಲ್ಲಿ ಹಲಾಲ್ ಮಾಂಸ ವಿಚಾರದಲ್ಲಿ ಇಷ್ಟೊಂದು ಗದ್ದಲ, ಗಲಾಟೆ ನಡೆಯುತ್ತಿದ್ದರೂ ಏನು ಗೊತ್ತಿಲ್ಲದಂತೆ ಮೌನವಾಗಿದ್ದೀರೇಕೆ? ಸರ್ಕಾರಕ್ಕೆ ಮಾನಮರ್ಯಾದೆ ಇದೆಯೇ?. ಸಿಎಂ ಬೊಮ್ಮಾಯಿವರಿಗೆ ತಾಕತ್ತಿದ್ದರೆ ಮಧ್ಯೆ ಪ್ರವೇಶಿಸಿ ಇದಕ್ಕೆ ತಡೆಯೊಡ್ಡಲಿ ಎಂದು ಕಿಡಿಕಾರಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಹಿಂದೂ ಪರಿಷತ್‌ ಹಾಗೂ ಭರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿದೆಯಾ?. ನಮ್ಮ ರೈತರು ಕಟ್ ಮಾಡುವ ಮಾಂಸವನ್ಮಾನು ಸ್ಡಚ್ಛಗೊಳಿಸಲು ಅದೇ ಸಮಾಜದವರೇ ಬರಬೇಕು.
ಈಗ ಹಲಾಲ್ – ಜಟ್ಕಾ ಕಟ್ ಅಂತಿದ್ದಾರೆ. ನಿಮ್ಮ ಜಟ್ಕಾ ಮಾಡುವುದಕ್ಕೆ, ಇನ್ನೊಂದು ಮಾಡುವುದಕ್ಕೂ ಅವರೇ ಬರಬೇಕು. ರೇಷ್ಮೆ, ಮಾವು ಬೆಳೆ ಮಾರಾಟಕ್ಕೆ ಈ ಪೋಲಿಸರು ಬರ್ತಾರಾ? ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ. ಅದನ್ನು ಖರೀದಿ ಮಾಡಲು ಆ ಸಮಾಜದವರೇ ಬರಬೇಕು. ವಿಶ್ವ ಹಿಂದೂ ಪರಿಷತ್‍ನವರು, ಬಜರಂಗದಳದವರು ಇವರ ಹೊಟ್ಟೆ ಮೇಲೆ ಹೊಡೆಯಲು, ದೇಶ ಹಾಳು ಮಾಡುವುದಕ್ಕೆ ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss