Wednesday, November 29, 2023

Latest Posts

ರೀ ರೈಲು ತೆರವು ಯಶಸ್ವಿ: ಮತ್ತೆ ಹಸಿರು ಮಾರ್ಗದಲ್ಲಿ ಮೆಟ್ರೊ ಸಂಚಾರ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರೀ ರೈಲು ಹಳಿ ತಪ್ಪಿದ್ದರಿಂದಾಗಿ ಸುಗಮ‌ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಇದೀಗ 12 ಗಂಟೆಗಳ ಕಾರ್ಯಾಚರಣೆ ಬಳಿಕ ರೀ ರೈಲು ವಾಹನವನ್ನು ಸ್ಥಳದಿಂದ ಲಿಫ್ಟ್​ ಮಾಡಲಾಗಿದೆ.

ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ್ದ ಆರ್‌ಆರ್‌ವಿ ತೆರವು ಯಶಸ್ವಿಯಾಗಿದೆ. ಹೀಗಾಗಿ ಹಸಿರು ಮಾರ್ಗದಲ್ಲಿ ಮತ್ತೆ ಮೆಟ್ರೋ ರೈಲು ಸಂಚಾರ ಆರಂಭಿಸಿದೆ.

ನಾಗಸಂದ್ರದಿಂದ ರೇಷ್ಮೆ ಸಂಸ್ಥೆಯ ಹಸಿರು ಮಾರ್ಗದಲ್ಲಿ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ರೀ ರೈಲು ಹಳಿ ತಪ್ಪಿದ್ದರಿಂದ ಅನಿವಾರ್ಯವಾಗಿ ಉಭಯ ಹಳಿಗಳ ಮಧ್ಯೆ ಮೆಟ್ರೋ ಸಂಚಾರವನ್ನು ತಡೆಹಿಡಿಯಲಾಗಿತ್ತು. ಈ ಸಂಗತಿ ತಿಳಿಯದೇ ಹಲವು ಪ್ರಯಾಣಿಕರು ಯಶವಂತಪುರ ಮೆಟ್ರೋ ರೈಲು ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸದ್ಯ ಹಳಿಯಿಂದ ರೀ ರೈಲನ್ನು ತೆರವುಗೊಳಿಸುವ ಕಾರ್ಯ ಯಶಸ್ವಿಯಾಗಿದ್ದು, ಮಧ್ಯಾಹ್ನ 3.40 ರಿಂದ ನಮ್ಮ ಮೆಟ್ರೋ ಸಂಚಾರ ಮತ್ತೆ ಎಂದಿನಂತೆ ಆರಂಭಗೊಂಡಿದೆ. ಎಂದಿನಂತೆ ನಾನ್ ಫೀಕ್ ಅವರ್ ನಲ್ಲಿ ಹತ್ತು ನಿಮಿಷಕ್ಕೊಂದು ರೈಲು ಸಂಚಾರ ನಡೆಸುತ್ತಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!