ವಿದ್ಯಾವಂತ ಮುಸ್ಲಿಮರನ್ನು ತಲುಪಿ, ಆಕ್ಷೇಪಾರ್ಹ ಮಾತಗಳನ್ನು ನಿಲ್ಲಿಸಿ: ಕಾರ್ಯಕಾರಿಣಿಯಲ್ಲಿ ಸಭೆಯಲ್ಲಿ ಮೋದಿ ಕಿವಿಮಾತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ((BJP Executive Meeting).) ಪಕ್ಷದ ನಾಯಕರಿಗೆ ಪ್ರಧಾನಿ ಮೋದಿ ಪ್ರಮುಖ ಕಿವಿಮಾತನ್ನು ಹೇಳಿದ್ದಾರೆ.

ಚರ್ಚೆಗಳ ಕುರಿತು ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ದಿಲ್ಲಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವಿದ್ಯಾವಂತ ಮುಸ್ಲಿಮರನ್ನು ತಲುಪುವ ಮೂಲಕ ಅವರಿಗೆ ಸರಕಾರದ ಯೋಜನೆಗಳ ಕುರಿತು ಮನವರಿಕೆ ಮಾಡಬೇಕು ಹಾಗೂ ಸರಕಾರದ ಯೋಜನೆಯಲ್ಲಿ ಭಾಗಿಯಾಗುವಂತೆ ಮಾಡಬೇಕು . ಅಲ್ಲದೆ, ಮುಸ್ಲಿಮರ ವಿರುದ್ಧ ವಿವಾದಾತ್ಮಕ ಟೀಕೆ ಮಾಡುವುದನ್ನು ಮುಂದುವರಿಸಬಾರದು ಎಂದು ಸೂಚನೆ ಕೊಟ್ಟಿದ್ದಾರೆ.

ಸಚಿವರು ವಿದ್ಯಾವಂತ ಮುಸ್ಲಿಮರ ಬಳಿ ತೆರಳಿ ಅಭಿವೃದ್ಧಿ ಕಾರ್ಯಗಳನ್ನು ಮನದಟ್ಟು ಮಾಡಬೇಕು. ಅವರು ಬಿಜಿಪಿಗೆ ಮತ ಹಾಕುತ್ತಾರೋ, ಇಲ್ಲವೋ ಎಂಬುದನ್ನು ಪರಿಗಣಿಸದೇ ಸರಕಾರದ ಉದ್ದೇಶಗಳನ್ನು ಹೇಳಬೇಕು ಎಂದು ಪ್ರಧಾನಿ ಮೋದಿ ಅವರು ಸಲಹೆ ಕೊಟ್ಟಿದ್ದಾರೆ.

ಅದೇ ರೀತಿ ಅಲ್ಪ ಸಂಖ್ಯಾತ ಸಮುದಾಯಗಳ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನ ತಕ್ಷಣವೇ ನಿಲ್ಲಿಸಬೇಕು ಎಂಬುದಾಗಿ ಮೋದಿ ಹೇಳಿದ್ದಾರೆ ಎಂಬುದಾಗಿಯೂ ದೇವೇಂದ್ರ ಫಡ್ನವಿಸ್ ಅವರು ನುಡಿದಿದ್ದಾರೆ.

ಅಲ್ಪಸಂಖ್ಯಾತರಾದ ಬೋಹ್ರಾಗಳು, ಪಸ್ಮಾಂಡಾಗಳು ಮತ್ತು ಸಿಖ್ಖರು ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವನ್ನು ತಲುಪುವಂತೆ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!