ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿರೋಧ ಪಕ್ಷಗಳ ಯಾವುದೇ ಪ್ರಶ್ನೆಗಳಿಗೆ ವಿಳಂಬ ಮಾಡದೆ ಸೂಕ್ತ ಉತ್ತರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆಗಳ ಬಗ್ಗೆ ಸರ್ಕಾರ ಕಾಲಹರಣ ಮಾಡದು. ಬರಗಾಲದ ಚರ್ಚೆ ಬಗ್ಗೆ ಇಂದು ಉತ್ತರ ನೀಡುತ್ತೇವೆ, ಈಗಾಗಲೇ ಪ್ರಸ್ತಾಪವಾಗಿರುವ ಪ್ರಶ್ನೆಗಳ ಬಗ್ಗೆಯೂ ವಿಳಂಬ ಮಾಡದೆ ಗಮನಹರಿಸುತ್ತೇವೆ ಎಂದರು.
ಬಿಜೆಪಿ ನಾಯಕರ ನಡುವಿನ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ, ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇರಲಿಲ್ಲ. ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ಜನ ಅವರನ್ನು ತಿರಸ್ಕರಿಸಿದ್ದಾರೆ. ಪಕ್ಷದಲ್ಲಿ ಎರಡು ಗುಂಪುಗಳಿವೆ ಎಂದರು.