MUDA SCAM | ಸುಪ್ರೀಂ ಕೋರ್ಟ್‌ಗೆ ಹೋಗಲು ತಯಾರಿದ್ದೇವೆ: ಪ್ರಿಯಾಂಕ್‌ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ.
ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಹೋಗಲು ತಯಾರಾಗಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ತನಿಖಾ ಸಂಸ್ಥೆಗಳಿಂದ ಸಾಧ್ಯವಾಗದ ಕಾರಣ, ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ತಿದ್ದಾರೆ. ಮೋದಿ, ಅಮಿತ್ ಶಾ, ರಾಜ್ಯಪಾಲರು ಎಲ್ಲರೂ ಅವರ ಬಳಿಕ ಇರಬಹುದು. ನಮ್ಮ ಬಳಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಇದೆ. ವೈಯುಕ್ತಿಕವಾಗಿ ಆಶ್ಚರ್ಯವಾಗಿಲ್ಲ ಎಂದಿದ್ದಾರೆ

ಈ ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಏನೇಲ್ಲ ಆಗಿದೆ? ದೆಹಲಿ, ಜಾರ್ಖಂಡ್ ಕೇಸ್‌ನಲ್ಲಿ ಏನಾಯಿತು? ಸುಪ್ರೀಂ ಕೋರ್ಟ್ ಛೀಮಾರಿ ಹಾಕಿಲ್ವಾ? ಇವರಿಗೆ ರಾಜೀನಾಮೆ ಕೇಳುವ ನೈತಿಕತೆ ಇದಿಯಾ? ಆಪರೇಷನ್ ಕಮಲ, ಹೆಣದ ಮೇಲೆ, ಕಸದ ಮೇಲೆ ಹಣ ಮಾಡೊದು ಇವರು. ದಲಿತರ ಮೇಲೆ ದೌರ್ಜನ್ಯ ಮಾಡುವುದು ಇವರು ಎಂದು ತಿವಿದಿದ್ದಾರೆ.

ವಿಜಯೇಂದ್ರ ಮೊದಲು ರಾಜೀನಾಮೆ ನೀಡಬೇಕಾಗುತ್ತದೆ. ಅವರ ತಂದೆ ಮೇಲೆ ಪೋಕ್ಸೋ ಕೇಸ್ ಇದೆ. ಅವರು ರಾಜೀನಾಮೆ ಕೊಡಬೇಕು. ತನಿಖಾ ಸಂಸ್ಥೆಗಳು ಸಿಎಂ ಸಿದ್ದರಾಮಯ್ಯ ಹೆಸರು ಹೇಳುವಂತೆ ಒತ್ತಾಯ ಮಾಡಿಲ್ವಾ? ನಾವು ಎರಡು ನ್ಯಾಯಲಯಕ್ಕೆ ಹೋಗಲು ತಯಾರಿದ್ದೇವೆ? ಸುಪ್ರೀಂ ಕೋರ್ಟ್ ಮತ್ತು ಜನತಾ ನ್ಯಾಯಾಲಯಕ್ಕೆ ಹೋಗಲು ತಯಾರಿದ್ದೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!