Sunday, November 27, 2022

Latest Posts

ರಷ್ಯಾ-ಉಕ್ರೇನ್ ಯುದ್ಧ ಅಂತ್ಯಗೊಳಿಸಲು ಮಧ್ಯಸ್ಥಿಕೆಗೆ ಸಿದ್ಧ ಎಂದ ಪೋಪ್ ಫ್ರಾನ್ಸಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷವನ್ನು ಅಂತ್ಯಗೊಳಿಸಲು ವ್ಯಾಟಿಕನ್ ಸಾಧ್ಯವಿರುವ ಎಲ್ಲವನ್ನೂ ಮಾಡಲು ಸಿದ್ಧವಾಗಿದೆ ಎಂದು ಪೋಪ್ ಫ್ರಾನ್ಸಿಸ್ ಇಟಾಲಿಯನ್ ದಿನಪತ್ರಿಕೆ ಲಾ ಸ್ಟಾಂಪಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿ ಸಾಧ್ಯ ಎಂದು ನೀವು ನಂಬುತ್ತೀರಾ ಎಂಬ ಪ್ರಶ್ನೆಗೆ, ಈ ಬಗ್ಗೆ ನಾವು ವಿಶ್ವಾಸ ಕಳೆದುಕೊಳ್ಳಬಾರದು ಎಂದು ಪೋಪ್ ಫ್ರಾನ್ಸಿಸ್ ಪ್ರತಿಕ್ರಿಯಿಸಿದ್ದಾರೆ.
” ಅಗತ್ಯವಿದ್ದರೆ ಈ ಎರಡು ರಾಷ್ಟ್ರಗಳ ನಡುವೆ ಮಧ್ಯಸ್ಥಿಕೆ ವಹಿಸಲು ನಾವು ಸಿದ್ಧರಿದ್ದೇವೆ. ಪ್ರತಿಯೊಬ್ಬರೂ ತಮ್ಮ ಹೃದಯದಿಂದ ಹಿಂಸಾಚಾರವನ್ನು ಈ ಕಾಲಮಾನದ ಅಗತ್ಯವಾಗಿದೆ. ನಾವೆಲ್ಲರೂ ಶಾಂತಿಪ್ರಿಯರಾಗಿರಬೇಕು. ಕದನವಿರಾಮವೆಂದರೆ ನಿಜವಾದ ಶಾಂತಿ, ಇದು ಮುಕ್ತ ಸಂಭಾಷಣೆಯ ಫಲವಾಗಿ ಸಿಗುವಂತಹದ್ದು ಎಂದು ಪೋಪ್ ಫ್ರಾನ್ಸಿಸ್ ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!