January15, 2026
Thursday, January 15, 2026
spot_img

ರಾಹುಲ್ ಗಾಂಧಿ ಭೇಟಿಗೆ ‘ಕೈ’ ಕಲಿ ರೆಡಿ: ಕುತೂಹಲ ಮೂಡಿಸಿದ ಡಿ.ಕೆ.ಶಿವಕುಮಾರ್ ನಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದ ಚಟುವಟಿಕೆಗಳ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರವಾಸದ ಪ್ರಮುಖ ಉದ್ದೇಶಗಳನ್ನು ಹಂಚಿಕೊಂಡಿದ್ದಾರೆ.

ನಾಳೆ ಮಧ್ಯಾಹ್ನ ದೆಹಲಿಯಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಸಭೆ ನಿಗದಿಯಾಗಿದೆ. ವಿಶೇಷವಾಗಿ ಅಸ್ಸಾಂ ರಾಜ್ಯದ ವಿಚಾರಗಳಿಗೆ ಸಂಬಂಧಿಸಿದಂತೆ ಈ ಭೇಟಿ ನಡೆಯಲಿದೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

ರಾಹುಲ್ ಗಾಂಧಿ ಭೇಟಿ ಮತ್ತು ಅಲ್ಲಿಂದ ರವಾನೆಯಾಗುವ ಸಂದೇಶಗಳ ಕುರಿತು ಪ್ರಶ್ನಿಸಿದಾಗ, ತಮ್ಮದೇ ಶೈಲಿಯಲ್ಲಿ ಉತ್ತರಿಸಿದ ಡಿಕೆಶಿ, “ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವುದು ಅಥವಾ ಫೋನ್‌ನಲ್ಲಿ ಮಾತನಾಡುವುದು ಹೊಸದೇನಲ್ಲ. ಇದೆಲ್ಲವನ್ನೂ ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ” ಎಂದರು.

ರಾಹುಲ್ ಗಾಂಧಿ ಮುಂದೆ ನಿಮ್ಮ ವೈಯಕ್ತಿಕ ಬಯಕೆಗಳನ್ನು ಇಡುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ನಗೆ ಬೀರಿದ ಅವರು, “ನನ್ನಷ್ಟೇ ಅಲ್ಲ, ನಿಮ್ಮ ಬಯಕೆಗಳನ್ನೂ ಅವರ ಮುಂದೆ ಇಡುತ್ತೇನೆ” ಎಂದು ಹಾಸ್ಯಮಯವಾಗಿ ಉತ್ತರಿಸಿದರು.

ಶಿಷ್ಟಾಚಾರದ ಪಾಲನೆ: ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿ, “ದೆಹಲಿಗೆ ಹೋದಾಗ ನಾಯಕರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ಅಲ್ಲಿ ಶಿಷ್ಟಾಚಾರದ ಪ್ರಕಾರ ಎಲ್ಲರನ್ನೂ ಭೇಟಿ ಮಾಡುತ್ತೇನೆ” ಎಂದು ತಿಳಿಸಿದರು.

Most Read

error: Content is protected !!