ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಪ್ರಕರಣ: ಸತೀಶ್ ಜಾರಕಿಹೊಳಿ ಆಪ್ತೆ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ ಐದು ಕೋಟಿಗೆ ಡಿಮ್ಯಾಂಡ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ‌ ಆಪ್ತೆ, ರಾಮಗನಟ್ಟಿ ಗೋಕಾಕ್ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಘಟಪ್ರಭಾ ಠಾಣೆ ಪೊಲೀಸರು ಕೇವಲ 24ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದು, ಅಪಹರಣವಾಗಿದ್ದ ಉದ್ಯಮಿಯನ್ನು ರಕ್ಷಿಸಿದ್ದಾರೆ.

ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್‌ ಮಾಡಿದ್ದರು. ಕಿಡ್ನ್ಯಾಪ್‌ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನ್ಯಾಪ್‌ ಪ್ರಕರಣ ದಾಖಲಾದ 24 ಗಂಟೆಯಲ್ಲಿ ಪೊಲೀಸರು ಬಸವರಾಜನನ್ನು ರಕ್ಷಣೆ ಮಾಡಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!