Friday, July 1, 2022

Latest Posts

ದೇಶಾದ್ಯಂತ 18 ಆಮ್ಲಜನಕ ಘಟಕಗಳನ್ನು ಸ್ಥಾಪಿಸಲು ಮುಂದಾದ ರಿಯಲ್ ಹೀರೋ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಡವರ ಕಷ್ಟಕ್ಕೆ ಮಿಡಿಯುವ ರಿಯಲ್ ಹೀರೋ ಬಾಲಿವುಡ್ ನ ಸೋನು ಸೂದ್ ದೇಶಾದ್ಯಂತ  18 ಆಮ್ಲಜನಕದ ಘಟಕಗಳನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ.

ಆಂಧ್ರ ಪ್ರದೇಶದ ಕರ್ನೂಲು, ಮಂಗಳೂರು ಹಾಗೂ  ನೆಲ್ಲೂರಿನಲ್ಲಿ ಈಗಾಗಲೇ ಆಮ್ಲಜನಕದ ಘಟಕ ಸ್ಥಾಪನೆಯ ಕೆಲಸ ಆರಂಭಗೊಂಡಿದೆ.

ಇನ್ನುಳಿದ ತಮಿಳುನಾಡು, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಪಂಜಾಬ್, ಉತ್ತರಾಖಂಡ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಮಧ್ಯ ಪ್ರದೇಶದ ಹಾಗೂ ಇನ್ನಿತರ ರಾಜ್ಯಗಳಲ್ಲಿ ಆಮ್ಲಜನಕದ ಘಟಕಗಳನ್ನು ಸ್ಥಾಪಿಸುವ ಕೆಲಸ ಪ್ರಾರಂಭವಾಗಲಿದೆ ಎಂದು ಸೋನು ಸೂದ್ ತಿಳಿಸಿದ್ದಾರೆ

ಕಳೆದ ಕೆಲ ತಿಂಗಳುಗಳಲ್ಲಿ ಆಮ್ಲಜನಕದ ಅಲಭ್ಯತೆಯ ಸಮಸ್ಯೆಯನ್ನು ನಾವೆಲ್ಲ ಎದುರಿಸುತ್ತಿದ್ದೇವೆ. ನಾನು ಹಾಗೂ ನನ್ನ ತಂಡ, ಆಮ್ಲಜನಕದ ಸಮಸ್ಯೆಯನ್ನು ಹೋಗಲಾಡಿಸಬೇಕೆಂದು ಆಲೋಚನೆ ಮಾಡುತ್ತಿದ್ದವು. ಹೀಗಾಗಿ ಆಮ್ಲಜನಕದ ಘಟಕಗಳನ್ನು ಸಾಧ್ಯವಾದಷ್ಟು ಕಡೆಗಳಲ್ಲಿ ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ ಎಂದು ಸೂದ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss