ರಿಯಲ್ ಸ್ಟಾರ್ UI ಅಬ್ಬರ: ಮೊದಲ ದಿನವೇ 10 ಕೋಟಿ ಕಲೆಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಯುಐ ಸಿನಿಮಾ ಇಂದು (ಡಿ.20) ಅದ್ಧೂರಿಯಾಗಿ ರಿಲೀಸ್ ಆಗಿದೆ. ಮೊದಲ ದಿನವೇ ಕರ್ನಾಟಕದಲ್ಲಿ ಯುಐ ಸಿನಿಮಾ 10 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ.

UI ಬಹುಭಾಷೆಗಳಲ್ಲಿ ರಿಲೀಸ್ ಆಗಿ ಉತ್ತಮ ರೆಸ್ಪಾನ್ಸ್ ಪಡೆದಿದೆ. ಮೊದಲ ದಿನವೇ ಕರ್ನಾಟಕದಲ್ಲಿ 10 ಕೋಟಿ ರೂ. ಕಲೆಕ್ಷನ್ ಮಾಡಿದೆ. ಆಂಧ್ರ ಪ್ರದೇಶ, ತೆಲಂಗಾಣದಲ್ಲೂ ಹೌಸ್‌ಫುಲ್ ಪ್ರದರ್ಶನ ಕಂಡಿದೆ. ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಕೊಂಡಾಡಿದ್ದಾರೆ.

UI ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ತಲೆಗೆ ಉಪೇಂದ್ರ ಹುಳ ಬಿಟ್ಟಿದ್ದಾರೆ. ಚಿತ್ರದ ಕಥೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಳಗ್ಗೆ 6:30ರಿಂದಲೇ ಚಿತ್ರದ ಪ್ರದರ್ಶನ ಶುರುವಾಗಿದೆ. ‘ಯುಐ’ ಚಿತ್ರ ನೋಡಿ ಫ್ಯೂಚರ್ ಫಿಲ್ಮ್, ಮತ್ತೊಮ್ಮೆ ಸಿನಿಮಾ ನೋಡಿದ್ರೆನೇ ಅರ್ಥವಾಗೋದು ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಎಂದಿಗೂ ಕಾಯಕವೇ ಕೈಲಾಸ, ಕೆಲಸ ಮಾಡಿ ಅಂತ ಹೇಳಿದ್ದಾರೆ. ಜೀವನದ ಬಗ್ಗೆ ಫೋಕಸ್ ಮಾಡಿ ಅನ್ನುವ ಸಂದೇಶ ಜನರಿಗೆ ನಟ ಕೊಟ್ಟಿದ್ದಾರೆ. ಉಪೇಂದ್ರ ನಟನೆ, ನಿರ್ದೇಶನಕ್ಕೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!