ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಅಲ್ಲು ಅರ್ಜುನ್ ಇಂದು ಮುಂಜಾನೆ ಚಂಚಲಗೂಡ ಜೈಲಿನಿಂದ ಹೊರಗೆ ಬಂದಿದ್ದಾರೆ. ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು ಅಲ್ಲು ಅರ್ಜುನ್ ಮನೆಗೆ ತೆರಳಿ ಯೋಗ ಕ್ಷೇಮ ವಿಚಾರಿಸಿದ್ದಾರೆ.
ಇದೇ ದಿನ ನಟ ಉಪೇಂದ್ರ, ನಿರ್ಮಾಪಕ, ಲಹರಿ ಸಂಸ್ಥೆ ಮಾಲೀಕ ಲಹರಿ ವೇಲು ಅವರು ಅಲ್ಲು ಅರ್ಜುನ್ ಅನ್ನು ಭೇಟಿಯಾಗಿದ್ದಾರೆ.
ಉಪೇಂದ್ರ ಅವರು ತಮ್ಮ ‘ಯುಐ’ ಸಿನಿಮಾದ ಪ್ರಚಾರಕ್ಕಾಗಿ ಹೈದರಾಬಾದ್ಗೆ ತೆರಳಿದ್ದರು. ಈ ವೇಳೆ ಅಲ್ಲು ಅರ್ಜುನ್ ನಿವಾಸಕ್ಕೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾವನ್ನು ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಅವರ ಗೀತಾ ಪ್ರೊಡಕ್ಷನ್ ಮೂಲಕ ಆಂಧ್ರ ಮತ್ತು ತೆಲಂಗಾಣಗಳಲ್ಲಿ ವಿತರಣೆ ಮಾಡಲಾಗುತ್ತಿದೆ. ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ ಇನ್ನಿತರೆ ಭಾಷೆಗಳಲ್ಲಿ ಡಿಸೆಂಬರ್ 20ಕ್ಕೆ ಬಿಡುಗಡೆ ಆಗಲಿದೆ.