ರಿಯಲ್ ಸ್ಟಾರ್ ಉಪೇಂದ್ರ ‘ಯುಐ’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ನಟ ಉತ್ತರ ಕೊಟ್ಟಿದ್ದಾರೆ.

ಉಪೇಂದ್ರ ನಟಿಸಿ, ನಿರ್ದೇಶನ ಮಾಡುತ್ತಿರುವ ಯುಐ ಸಿನಿಮಾ ಇದೇ ಅಕ್ಟೋಬರ್‌ನಲ್ಲಿ ರಿಲೀಸ್ ಮಾಡೋದಾಗಿ ಉಪೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದಾರೆ. ಈ ವೇಳೆ, ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ಕೂಡ ರಿಲೀಸ್ ಆಗ್ತಿದೆ. ಮಾರ್ಟಿನ್ ಮುಂದೆ ಅಬ್ಬರಿಸೋಕೆ ಯುಐ ಸಿನಿಮಾ ಸಜ್ಜಾಗಿದೆ.

ಇನ್ನೂ ಟೈಟಲ್‌ನಲ್ಲೇ ವಿಭಿನ್ನತೆ ತೋರಿಸಿರುವ ನಟ ಉಪೇಂದ್ರ ಈ ಬಾರಿ ಕಲಿಯುಗದ ಕಥೆ ಹೇಳೋಕೆ ಹೊರಟಿದ್ದಾರೆ. ಉಪೇಂದ್ರಗೆ ಜೋಡಿಯಾಗಿ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ.

ಈ ಚಿತ್ರವನ್ನು ಲಹರಿ ಸಂಸ್ಥೆ ಮತ್ತು ಕೆ ಪಿ ಶ್ರೀಕಾಂತ್ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ‘ಕಾಂತಾರ’ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತವಿದೆ. ಅಂದಹಾಗೆ, ಯುಐ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!