ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸಲಿದ್ದಾರೆ.
ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸಲು ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಬ್ಲ್ಯಾಕ್ ಆ್ಯಂಡ್ ವೈಟ್ ಥೀಮ್ನಲ್ಲಿ ಮೂಡಿಬಂದ ಈ ಪೋಸ್ಟರ್ ಕಂಡು ಉಪೇಂದ್ರ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಸಿನಿಮಾಗೆ ಲೋಕೇಶ್ ಕನಗರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ.
ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ತಲೈವಾ ರಜನಿಕಾಂತ್ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.
ರಜನಿಕಾಂತ್ ಜೊತೆ ಅನೇಕ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಅಕ್ಕಿನೇನಿ ನಾಗಾರ್ಜುನ, ಶ್ರುತಿ ಹಾಸನ್, ಸತ್ಯರಾಜ್, ರಚಿತಾ ರಾಮ್, ಉಪೇಂದ್ರ ಮುಂತಾದವರು ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದಾರೆ. ಅದ್ದೂರಿ ಬಜೆಟ್ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಬಾಲಿವುಡ್ ನಟ ಆಮಿರ್ ಖಾನ್ ಕೂಡ ನಟಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬಂದಿದೆ.
ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್ ಸ್ಟಾರ್ ರಜಿನಿ ಸರ್ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್ ಬ್ಲೆಸ್ಡ್ ಅಂತ ಲೋಕೇಶ್ ಕನಕರಾಜ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.