ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರಿಗೆ ಅನಿರೀಕ್ಷಿತ ಹಿನ್ನಡೆಯಾಗಿದೆ.
ನಗರದ ಬಾಷಾ ನಗರದ ಮುಸ್ಲಿಂ ರಸ್ತೆಯಲ್ಲಿ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಸಾವಿರಾರು ಮುಸ್ಲಿಂ ಯುವಕರು ಮತ್ತು ಸಮುದಾಯದ ಮುಖಂಡರು ‘ಗೋ ಬ್ಯಾಕ್ ಕಾಂಗ್ರೆಸ್’ ಎಂದು ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಪ್ರಬಲ ಬೇಡಿಕೆ ಇತ್ತಾದರೂ, ಹೈಕಮಾಂಡ್ ಮತ್ತೆ ಶಾಮನೂರು ಕುಟುಂಬಕ್ಕೇ ಮಣೆ ಹಾಕಿರುವುದು ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿಭಟನೆಯ ನಡುವೆಯೂ ಸಮರ್ಥ್ ಶಾಮನೂರು ಅವರು ಪ್ರಚಾರ ಮುಂದುವರಿಸಿ ಅಲ್ಲಿಂದ ತೆರಳಿದ್ದಾರೆ.



