ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿಯ ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಬದಲಿಗೆ ಯಾಸಿರ್ ಅಹ್ಮದ್ ಖಾನ್ ಗೆ ಟಿಕೆಟ್ ಘೋಷಣೆಯಾಗಿದ್ದು, ಇದರಿಂದ ಬೇಸರಗೊಂಡಿರುವ ಅಜ್ಜಂಪೀರ್ ಖಾದ್ರಿ ಇದೀಗ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಇನ್ನು 13 ನಿಮಿಷ ಬಾಕಿ ಇರುವಂತೆ ಬೈಕ್ ನಲ್ಲಿ ಬಂದ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸಿದ್ದಾರೆ. ಅಜ್ಜಂಪೀರ್ ಖಾದ್ರಿಯ ಈ ನಡೆ ಇದೀಗ ಕಾಂಗ್ರೆಸ್ಸಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಜೊತೆಗೆಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರ ಕಾರಿನ ಗಾಜನ್ನು ಟಿಕೆಟ್ ವಂಚಿತ ಅಜ್ಜಂ ಫೀರ್ ಖಾದ್ರಿ ಅಭಿಮಾನಿಗಳು ಒಡೆದು ಹಾಕಿದ್ದಾರೆ.
ಶಿಗ್ಗಾಂವಿ ಕಾಂಗ್ರೆಸ್‍ನಲ್ಲಿ ಬಂಡಾಯದ ಬಿಸಿ ಹೆಚ್ಚಾಗಿದ್ದು, ಹೂಲಗೂರು ಗ್ರಾಮದಲ್ಲಿ ಖಾದ್ರಿ ಅಭಿಮಾನಿಗಳ ಮನವೊಲಿಸಲು ಸಚಿವ ಜಮೀರ್ ಅಹ್ಮದ್ ತೆರಳಿದ್ದರು. ಆದರೆ ಮನವೊಲಿಕೆ ಯತ್ನ ವಿಫಲವಾಗಿದೆ.
ಟಿಕೆಟ್ ಹಂಚಿಕೆಯಾಗುತ್ತಿದ್ದಂತೆ ಕಾಂಗ್ರೆಸ್ ರೌಡಿಶೀಟರ್‌ಗೆ ಟಿಕೆಟ್ ನೀಡಿದೆ ಎಂದು ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ವಂಚಿತ ಅಜ್ಜಂ ಫೀರ್ ಖಾದ್ರಿ ಆಕ್ರೋಶ ವ್ಯಕ್ತಪಡಿಸಿದ್ದರು.