ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಜತೆ ಕೈಜೋಡಿಸಿರುವ ದೇಶದ್ರೋಹಿಗಳು ಇಂದು ದೇಶಪ್ರೇಮದ ಬಗ್ಗೆ ಇತರರಿಗೆ ಉಪನ್ಯಾಸ ನೀಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ನಾವು ಕುರಿಗಳ ಉಡುಪಿನಲ್ಲಿರುವ ಈ ತೋಳಗಳಿಂದ ದೇಶವನ್ನು ರಕ್ಷಿಸಬೇಕಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರದ ಬಗ್ಗೆ ಯುವ ಪೀಳಿಗೆಗೆ ಶಿಕ್ಷಣ ನೀಡುವುದು ಮುಖ್ಯವಾಗಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 6.5 ಲಕ್ಷಕ್ಕೂ ಹೆಚ್ಚು ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಪಕ್ಷದ ಕಚೇರಿಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದ ಶಿವಕುಮಾರ್ ಹೇಳಿದರು.