Wednesday, August 10, 2022

Latest Posts

ಮನೆಯಲ್ಲಿ ಕೊರೋನಾ ಲಸಿಕೆ ಪಡೆದ ಸಚಿವ ಬಿ.ಸಿ.ಪಾಟೀಲ್: ವರದಿ ಕೇಳಿದ ಕೇಂದ್ರ ಆರೋಗ್ಯ ಸಚಿವಾಲಯ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೃಷಿ ಸಚಿವ ಬಿ.ಸಿ ಪಾಟೀಲ್​​ ತಮ್ಮ ಮನೆಗೆ ಆರೋಗ್ಯ ಸಿಬ್ಬಂದಿಯನ್ನ ಕರೆಸಿಕೊಂಡು ಕೊರೋನಾ ಲಸಿಕೆ ಪಡೆದಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಸರ್ಕಾರಕ್ಕೆ ವರದಿ ಕೇಳಿದೆ.
ಇದೇ ವಿಚಾರವಾಗಿ ಮಾತನಾಡಿರುವ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್, ಕೋವಿಡ್ ಪ್ರೋಟೋಕಾಲ್​​ನಲ್ಲಿ ಇದಕ್ಕೆ ಅನುಮತಿ ಇಲ್ಲ. ಈಗಾಗಲೇ ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದೇವೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ಹಿರಿಯ ರಾಜಕಾರಣಿಗಳು ಸ್ವತಃ ಆಸ್ಪತ್ರೆಗೆ ತೆರಳಿ ಕೊರೋನಾ ಲಸಿಕೆಯನ್ನು ಪಡೆದಕೊಂಡಿದ್ದಾರೆ. ಆದರೆ ಸಚಿವ ಬಿ.ಸಿ.ಪಾಟೀಲ್ ಆರೋಗ್ಯ ಅಧಿಕಾರಿಗಳನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಲಸಿಕೆ ಪಡೆದಿರುವುದು ತೀವ್ರ ಟೀಕೆ ವ್ಯಕ್ತವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss