ನಟ ಪುನೀತ್ ರಾಜ್ ಕುಮಾರ್ʼಗೆ ಮೈಸೂರು ವಿವಿಯಿಂದ ಮರಣೋತ್ತರ ಗೌರವ ಡಾಕ್ಟರೇಟ್

ಹೊಸದಿಗಂತ ವರದಿ, ಮೈಸೂರು:

ಅಗಲಿದ ಚಿತ್ರ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ನೀಡುವುದಾಗಿ ಘೋಷಿಸಿದೆ.
ಪುನೀತ್ ರಾಜ್‍ಕುಮಾರ್ ಅವರು ಚಿತ್ರ ರಂಗದಲ್ಲಿ ಮಾಡಿದ ಸಾಧನೆ ಹಾಗೂ ಅವರು ಎಲೆ ಮರೆ ಕಾಯಿಯಂತೆ ಮಾಡಿಕೊಂಡು ಬಂದಿದ್ದ ಸಮಾಜ ಸೇವೆಯನ್ನು ಗುರುತಿಸಿ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ನೀಡಲಾಗುತ್ತದೆ ಎಂದು ವಿವಿಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು ಭಾನುವಾರ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.
ಮಾ.17 ರಂದು ಪುನೀತ್ ರಾಜ್‍ಕುಮಾರ್ ಅವರ ಹುಟ್ಟು ಹಬ್ಬ, ಅಂದೇ ಅವರ ನಟಿಸಿದ ಕೊನೆಯ ಚಿತ್ರ ಜೇಮ್ಸ್ ಬಿಡುಗಡೆಯಾಗುತ್ತಿದೆ. ಇದರ ಸಂಭ್ರಮದಲ್ಲಿದ್ದ ಅಭಿಮಾನಿಗಳಿಗೆ ಈಗ ಮೈಸೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ನೀಡುತ್ತಿರುವುದು ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!