ತೀರ್ಪು ಬರುವವರೆಗೆ ಸಾಮರಸ್ಯ ಕಾಪಾಡುವುದು ಅಗತ್ಯ: ಚಲುವರಾಯಸ್ವಾಮಿ

ಹೊಸದಿಗಂತ ವರದಿ,ಮಂಡ್ಯ:

ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ನ್ಯಾಯಾಲಯದಲ್ಲಿ ಇರುವುದರಿಂದ ಅಂತಿಮ ತೀರ್ಪು ಬರುವವರೆಗೆ ಸಾಮರಸ್ಯವನ್ನು ಕಾಪಾಡಿಕೊಂಡು ನಾಡಿನಲ್ಲಿ ಶಾಂತಿ ನೆಲೆಸುವಂತೆ ನೋಡಿಕೊಳ್ಳಬೇಕು ಎಂದು ಮಾಜಿ ಸಚಿವ, ರಾಜ್ಯ ಕಾಂಗ್ರೆಸ್ ವಕ್ತಾರ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದ ಲೋಕೋಪಯೋಗಿ ಇಲಾಖೆ ಕಟ್ಟಡದಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರ ಕಚೇರಿಯನ್ನು ಉದ್ಘಾಟಿಸಿ ನಂತರ ಸುದ್ದಿಗಾರರೊಡನೆ ಮಾತನಾಡಿದ ಅವರು, ಸರ್ಕಾರದ ಬೇಜವಾಬ್ದಾರಿ ನಡೆಯಿಂದಾಗಿ ಈ ವಿವಾದ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಬಿಜೆಪಿ ಹಾಗೂ ಆರ್‌ಎಸ್‌ನವರು ರಾಜಕೀಯ ಕಾರಣಕ್ಕಾಗಿ ಕೇಸರಿ ಶಾಲು ವಿವಾದವನ್ನು ಜೀವಂತವಾಗಿ ಮತ್ತು ಪ್ರಚೋದನಕಾರಿಯಾಗಿ ಇಟ್ಟಿದೆ ಎಂದು ಆರೋಪಿಸಿದರು.
ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಯಾವುದು ಸರಿ ಮತ್ತು ಯಾವುದು ತಪ್ಪು ಎಂಬುದರ ಚರ್ಚೆಗಿಂತ ಮುಖ್ಯವಾಗಿ ವಿದ್ಯಾರ್ಥಿಗಳ ನಡುವೆ ಸಾಮರಸ್ಯ ಮೂಡಿಸುವುದೇ ಪ್ರಮುಖವಾಗಿದೆ. ಕಾಂಗ್ರೆಸ್ ಎಂದಿಗೂ ಕೋಮು ವಿಚಾರದಲ್ಲಿ ರಾಜಕೀಯ ಮಾಡಿಲ್ಲಘಿ. ಈ ಬಗ್ಗೆ ಎಲ್ಲಿಯೂ ಪ್ರಚೋದನಕಾರಿ ಹೇಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!