Tuesday, December 2, 2025

ಶಬರಿಮಲೆ ಅಯ್ಯಪ್ಪನ ಹುಂಡಿಗೆ 15 ದಿನದಲ್ಲೇ ದಾಖಲೆ ಮೊತ್ತದ ಕಾಣಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಮೊದಲ 15 ದಿನದಲ್ಲೇ ಹುಂಡಿಗೆ 92 ಕೋಟಿ ರೂ. ಹರಿದುಬಂದಿದೆ.

ಈ ಕುರಿತು ಶಬರಿಮಲೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ದೇಗುಲಕ್ಕೆ ಈ 69 ಕೋಟಿ ರೂ. ಆದಾಯ ಬಂದಿತ್ತು. ಈ ಸಲ ಶೇ.33ರಷ್ಟು ಹೆಚ್ಚಳದೊಂದಿಗೆ 92 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿಸಿದೆ.

ಇದೇ ಅವಧಿಯಲ್ಲಿ ಕಳೆದ ವರ್ಷ ಸಂಗ್ರಹವಾಗಿದ್ದ ಮೊತ್ತಕ್ಕಿಂತ 23 ಕೋಟಿ ರೂ. ಅಧಿಕ. ಅದರಲ್ಲಿ 47 ಕೋಟಿ ರೂ. ಅರವಣ ಮಾರಾಟದಿಂದ ಸಂಗ್ರಹವಾಗಿದೆ. ಕಳೆದ ಬಾರಿ ಅರವಣ ಮಾರಾಟದಿಂದ 32 ಕೋಟಿ ರೂ. ಸಂಗ್ರಹವಾಗಿತ್ತು.

ಈ ವರ್ಷ ಯಾತ್ರೆ ಆರಂಭವಾದಾಗಿನಿಂದ ನ.30ರವರೆಗೆ 1.3 ಮಿಲಿಯನ್ ಯಾತ್ರಿಕರು ಭೇಟಿ ನೀಡಿದ್ದಾರೆ ಎಂದು ಮಂಡಳಿ ಹೇಳಿದೆ.

error: Content is protected !!