October 15, 2026
Thursday, October 15, 2026
spot_img

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಇಂದು ಆರಂಭವಾಗಿದೆ.

ಹೈ ಕೋರ್ಟ್‌ ಆದೇಶದ ಮೇರೆಗೆ ಮರು ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಐಡಿಎಸ್‌ಜಿ ಕಾಲೇಜಿನಲ್ಲಿ ಎಣಿಕೆ ಕಾರ್ಯ ನಡೆಯುತ್ತಿದೆ. ಚುನಾವಣಾಧಿಕಾರಿ ಗೌರವ್‌ ಶೆಟ್ಟಿ ನೇತೃತ್ವದಲ್ಲಿ ಮತ ಮರು ಎಣಿಕೆ ನಡೆಯಲಿದೆ. ಕೊಠಡಿಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ.

ಅಭ್ಯರ್ಥಿಗಳು, ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‌ ಸಮ್ಮುಖದಲ್ಲಿ ಮತ ಮರುಎಣಿಕೆ ನಡೆಯುತ್ತಿದೆ. ಎಲ್ಲರ ಸಮ್ಮುಖದಲ್ಲಿಯೇ ಸ್ಟ್ರಾಂಗ್‌ ರೂಮ್‌ ಓಪನ್‌ ಮಾಡಲಾಗಿದೆ.

Must Read