ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಸುಪ್ರೀಂಕೋರ್ಟ್ ಆದೇಶದಂತೆ ಕೋಲಾರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಇಂದು (ನವೆಂಬರ್ 11) ಒಟ್ಟು 18 ಸುತ್ತು ಮರುಮತ ಎಣಿಕೆ ಕಾರ್ಯ ನಡೆದಿದ್ದು, ಮರು ಎಣಿಕೆಯ ಫಲಿತಾಂಶವನ್ನು ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಿದೆ. ತದನಂತರ ನ್ಯಾಯಾಲಯ ಈ ಕುರಿತು ತನ್ನ ತೀರ್ಪು ಪ್ರಕಟಿಸಲಿದೆ.
ಕಾಂಗ್ರೆಸ್ ನ ಕೆ.ವೈ. ನಂಜೇಗೌಡ ಮತ್ತು ಬಿಜೆಪಿಯ ಕೆ.ಎಸ್. ಮಂಜುನಾಥ್ ಗೌಡ ನಡವಿನ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ಮರುಮತ ಎಣಿಕೆ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ.
2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನ ಕೆ.ವೈ.ನಂಜೇಗೌಡ 248 ಮತಗಳಿಂದ ಗೆದ್ದಿದ್ದರು. ಆದ್ರೆ, ಮತ ಎಣಿಕೆಯಲ್ಲಿ ಲೋಪವಾಗಿದ್ದು, ಈ ಸಂಬಂಧ ನಂಜೇಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಆದೇಶದಂತೆ ಮರುಮತ ಎಣಿಕೆ ಮಾಡಲಾಗಿದೆ.

