Tuesday, July 5, 2022

Latest Posts

ವೈದ್ಯರೊಂದಿಗೆ ಸಂಪರ್ಕದಲ್ಲಿರುವವರು ಮನೆಯಲ್ಲಿಯೇ ಚೇತರಿಸಿಕೊಳ್ಳಬಹುದು: ಆರೋಗ್ಯ ಸಚಿವ ಹರ್ಷವರ್ಧನ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ವೈದ್ಯರೊಂದಿಗೆ ಸಂಪರ್ಕದಲ್ಲಿರುವ ಹೆಚ್ಚಿನ ಸಂಖ್ಯೆಯ ಕೊರೋನಾ ರೋಗಿಗಳು ಮನೆಯಲ್ಲಿಯೇ ಚೇತರಿಸಿಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ದೇಶದಲ್ಲಿ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಸಿಗದೇ ಪರದಾಡುತ್ತಿದ್ದಾರೆ. ಇದರ ನಡುವೆ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ವೈದ್ಯರೊಂದಿಗೆ ಸಂಪರ್ಕದಲ್ಲಿರುವ ಹೆಚ್ಚಿನ ಸಂಖ್ಯೆಯ ರೋಗಿಗಳು ಮನೆಯಲ್ಲಿಯೇ ಕೊರೊನಾದಿಂದ ಗುಣಮುಖರಾಗಬಹುದು ಎಂದಿದ್ದಾರೆ.
ನಾನು ಆರೋಗ್ಯ ಸಚಿವರಾಗಿ ಮಾತ್ರವಲ್ಲ ವೈದ್ಯರಾಗಿ ಹೇಳುತ್ತಿದ್ದೇನೆ. ಸೋಂಕು ಧೃಡವಾದರೆ ಭಯಭೀತರಾಗಿ ಇಲ್ಲಿ ಅಲ್ಲಿಗೆ ಓಡಬೇಡಿ, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಡೆಯಬಹುದು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss