ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆದುಳಿನ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಡಿಸ್ಚಾರ್ಜ್ ಆಗಿದ್ದಾರೆ.
ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಸದ್ಗುರು ಸೋಮವಾರ ಪತ್ರಿಕೆ ಓದುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದರು.
ಮಾರ್ಚ್ 15 ರಂದು ಸದ್ಗುರು ಅವರನ್ನು ಎಂಆರ್ಐ ಸ್ಕ್ಯಾನ್ಗೆ ಒಳಪಡಿಸಲಾಯಿತು, ನಂತರ ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿತ್ತು ಎಂದು ಈಶಾ ಫೌಂಡೇಶನ್ ಹೇಳಿಕೆಯಲ್ಲಿ ತಿಳಿಸಿತ್ತು. ಮಾರ್ಚ್ 17 ರಂದು ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.