Monday, August 15, 2022

Latest Posts

ನಿನ್ನೆ ದೇಶದಲ್ಲಿ ಕೊರೋನಾ ಸೋಂಕಿತರಿಗಿಂತ ಗುಣಮುಖರ ಸಂಖ್ಯೆಯೇ ಹೆಚ್ಚು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ, ಕಳೆದ 24 ಗಂಟೆಯಲ್ಲಿ 30,256 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 30,773 ಇದ್ದ ಸೋಂಕಿತರ ಸಂಖ್ಯೆ ಇಂದು ಇಳಿಕೆಯಾಗಿದೆ.
ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 30,256  ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ  33,478,419 ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 43,938 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ  3,27,15,105 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,18,181 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 295 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ  4,45,133ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss