ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿಯಿರುವ 13 ಚಾಲಕ/ನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರದಿಂದ ಅನುಮತಿ ದೊರೆತಿದ್ದು, ಆರ್ಥಿಕ ಇಲಾಖೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಸಚಿವರು, ಆರ್ಥಿಕ ಇಲಾಖೆಯಿಂದ ಅನುಮತಿ ಲಭಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಇದರಿಂದ ಸಾರಿಗೆ ಸಂಸ್ಥೆಗಳಲ್ಲಿ ಹಲವು ವರ್ಗಗಳಿಂದ ಖಾಲಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.