ಇಸ್ರೇಲ್ ಸೇನೆಗೆ 15 ಸಾವಿರ ಭಾರತೀಯರ ನೇಮಕ: ಪ್ರಧಾನಿ ಮೋದಿ ವಿರುದ್ಧ ಖರ್ಗೆ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಸರ್ಕಾರದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಸಹಕಾರ ಒಪ್ಪಂದ ಪಶ್ಚಿಮ ಏಷ್ಯಾ ಯುದ್ಧಕ್ಕಾಗಿ ಇಸ್ರೇಲ್‌ ಸೇನೆಗೆ ಸುಮಾರು 15,000 ಭಾರತೀಯರನ್ನು ನೇಮಕ ಮಾಡಿಕೊಳ್ಳಲು ಅನುಕೂಲ ಮಾಡಿಕೊಡುತ್ತಿದೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.

ಪಶ್ಚಿಮ ಏಷ್ಯಾದ ಯುದ್ಧದ ನಡುವೆ ಮೋದಿ ಸರ್ಕಾರದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಇಸ್ರೇಲ್‌ನಲ್ಲಿ ಸುಮಾರು 15,000 ಭಾರತೀಯ ಉದ್ಯೋಗಿಗಳ ನೇಮಕಾತಿಯನ್ನು ಸುಗಮಗೊಳಿಸುತ್ತಿದೆ ಎಂದು ಖರ್ಗೆ ಬರೆದಿದ್ದಾರೆ. ಯುವ ಭಾರತೀಯರನ್ನು ಸುಳ್ಳು ನೆಪದಲ್ಲಿ ರಷ್ಯಾ-ಉಕ್ರೇನ್ ಯುದ್ಧಕ್ಕೆ ಸೇರಲು ವಂಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಆರೋಪ ಮಾಡಿದ್ದಾರೆ.

ಇದು ಮೋದಿ ಸರ್ಕಾರದ ಯುವಕರ ವಿರೋಧಿ ನೀತಿಗಳಿಂದ ಸೃಷ್ಟಿಯಾಗಿರುವ ದೇಶದ ನಿರುದ್ಯೋಗವನ್ನು ಬಿಂಬಿಸುತ್ತದೆ ಎಂದು ಮಲ್ಲಿಕಾರ್ಜುನ್ ಖರ್ಗೆ ಪೋಸ್ಟ್ ಮಾಡಿದ್ದಾರೆ.

‘ಕೌಶಲ್ಯವಿಲ್ಲದ, ಅರೆ-ಕುಶಲ ಮತ್ತು ವಿದ್ಯಾವಂತ ಯುವಕರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಯುದ್ಧಪೀಡಿತ ದೇಶಗಳಲ್ಲಿ ಹೆಚ್ಚಿನ ಸಂಬಳಕ್ಕಾಗಿ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ ಎನ್ನುತ್ತಿವೆ ವರದಿಗಳು. ಇದರರ್ಥ ಉದ್ಯೋಗ ಸೃಷ್ಟಿ ಕುರಿತಾದ ನಿಮ್ಮ ಹೇಳಿಕೆಗಳು ನಿಮ್ಮ ವೈಫಲ್ಯಗಳನ್ನು ಮರೆಮಾಚಲು ಸೃಷ್ಟಿಸಿದ ಸುಳ್ಳುಗಳಲ್ಲದೆ ಬೇರೇನು ಎಂಬುದಾಗಿದೆ ವಾಗ್ದಾಳಿ ನಡೆಸಿದ್ದಾರೆ.

ಯುದ್ಧಪೀಡಿತ ದೇಶಗಳಲ್ಲಿ ಬಲವಂತವಾಗಿ ಉದ್ಯೋಗಕ್ಕೆ ಸೇರುವಂತೆ ಹರಿಯಾಣದ ಯುವಕರಿಗೆ ಒತ್ತಡ ಹಾಕಲಾಗಿದೆ. ಮುಂಬರುವ ಚುನಾವಣೆಯಲ್ಲಿ ಹರಿಯಾಣದ ಜನರು ಸೂಕ್ತ ಉತ್ತರ ಕೊಡಲಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!