Sunday, December 10, 2023

Latest Posts

ಮುಂದಿನ ವರ್ಷಾಂತ್ಯದೊಳಗೆ 20 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಹೊಸದಿಗಂತ ವರದಿ,ಕುಕನೂರು:

2024ರ ಅಂತ್ಯದ ವೇಳೆಗೆ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೆಲ ತಿಂಗಳಾಗಿದೆ ಅಷ್ಟೇ. ರಾಜ್ಯದಲ್ಲಿರುವ ಶಾಲೆಗಳು ಮತ್ತು ವಿದ್ಯಾರ್ಥಿಗಳ ಪ್ರಮಾಣಕ್ಕೆ ಲೆಕ್ಕ ಹಾಕಿದರೆ 40 ಸಾವಿರ ಶಿಕ್ಷಕರ ಕೊರತೆಯಿದೆ. ಮೊದಲ ಹಂತದಲ್ಲಿ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೊತೆ ಚರ್ಚಿಸುವೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!