ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಧನ ಇಲಾಖೆಗೆ ಸದ್ಯದಲ್ಲೇ 2 ಸಾವಿರ ಲೈನ್‍ಮೆನ್‍ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಲೈನ್‍ಮೆನ್‍ಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ ಎಂದು ಹೇಳಿದರು. ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದುದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್‍ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು.