Wednesday, August 17, 2022

Latest Posts

ಮರುಕಳಿಸಿದೆ ನಿರ್ಭಯಾ ಪ್ರಕರಣ: ಅತ್ಯಾಚಾರ ನಡೆಸಿ, ಖಾಸಗಿ ಭಾಗಕ್ಕೆ ರಾಡ್ ತೂರಿದ ಕಾಮುಕ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮುಂಬೈನಲ್ಲಿ ನಿರ್ಭಯಾ ಮಾದರಿಯ ಅತ್ಯಾಚಾರ ಭಯಾನಕ ಘಟನೆ ನಡೆದಿದೆ.
30 ವರ್ಷದ ಮಹಿಳೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ ಆಕೆಯ ಖಾಸಗಿ ಭಾಗಕ್ಕೆ ರಾಡ್ ತುರುಕಿ ವಿಕೃತಿ ಮೆರೆದಿದ್ದಾನೆ.
ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.
ಮುಂಬೈನ ಸಕಿನಕ ಪ್ರದೇಶದ ಖೈರಾನಿ ಪ್ರದೇಶದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಡಿಸಿಪಿ ಹಾಗೂ ಹೆಚಚುವರಿ ಪೊಲೀಸ್ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೆಳಗಿನ ಜಾವ 3:30ಕ್ಕೆ ಫೋನ್ ಕರೆ ಬಂದಿದ್ದು, ಖೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
ತಕ್ಷಣವೇ ಪೊಲೀಸರು ಸ್ಥಳಕ್ಕೆ ತಲುಪಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಿಸಿಟಿವಿ ಆಧಾರದ ಮೇಲೆ ಪೊಲೀಸರು ಮೋಹನ್ ಚೌಹಾಣ್ ಹೆಸರಿನ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!