ಉತ್ತರಾಖಂಡದಲ್ಲಿ ರೆಡ್ ಅಲರ್ಟ್ ಘೋಷಣೆ: ಚಾರ್ ಧಾಮ್ ಯಾತ್ರೆ ಸ್ಥಗಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡದಲ್ಲಿ ಎಡೆಬಿಡದೆ ಮಳೆ (Rain) ಸುರಿಯುತ್ತಿರುವ ಪರಿಣಾಮ ಆಗಸ್ಟ್ 14 ಮತ್ತು 15ರಂದು ಹವಾಮಾನ ಇಲಾಖೆಯು (Meteorological Department) (Uttarakhand) ರೆಡ್ ಅಲರ್ಟ್ ಘೋಷಿಸಿದೆ .

ಜೊತೆಗೆ ಚಾರ್ ಧಾಮ್ ಯಾತ್ರೆಯನ್ನು (Char Dham Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಉತ್ತರಾಖಂಡದಲ್ಲಿ ಮಳೆ (Rain) ಸುರಿಯುತ್ತಿರುವ ಪರಿಣಾಮ ಹಲವು ಕಡೆ ಭೂಕುಸಿತ ಉಂಟಾಗಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಬದರಿನಾಥ, ಕೇದಾರನಾಥ, ಗಂಗೋತ್ರಿಯಂತಹ ಪವಿತ್ರ ಕ್ಷೇತ್ರಗಳಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿಗಳಿಗೆ ಅಡಚಣೆ ಉಂಟಾಗಿದೆ. ರುದ್ರಪ್ರಯಾಗ, ದೇವಪ್ರಯಾಗ ಮತ್ತು ಶ್ರೀನಗರದಲ್ಲಿ ಗಂಗಾ, ಮಂದಾಕಿನಿ ಮತ್ತು ಅಲಕಾನಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಿದೆ.

ಡೆಹ್ರಾಡೂನ್ ಮತ್ತು ನೈನಿತಾಲ್ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!