October 16, 2026
Friday, October 16, 2026
spot_img

ರೆಡ್ ಅಲರ್ಟ್ ಎಫೆಕ್ಟ್: ಕಾಸರಗೋಡಿನ ಶಾಲೆ-ಕಾಲೇಜುಗಳಿಗೆ ನಾಳೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ, ಜೂನ್ 6ರಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಯಾವ್ಯಾವ ಸಂಸ್ಥೆಗಳಿಗೆ ರಜೆ ಅನ್ವಯ?

ಜಿಲ್ಲಾಧಿಕಾರಿಗಳ ಆದೇಶದಂತೆ ಶಾಲೆಗಳು, ವೃತ್ತಿಪರ ಕಾಲೇಜುಗಳು, ಅಂಗನವಾಡಿಗಳು, ಟ್ಯೂಷನ್ ಕೇಂದ್ರಗಳು, ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ. ಕೇಂದ್ರ ಸರ್ಕಾರದ ಶಿಕ್ಷಣ ಸಂಸ್ಥೆಗಳು ಮತ್ತು ಮದರಸಾಗಳಿಗೂ ಈ ಆದೇಶ ಅನ್ವಯಿಸುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ:

ಪರೀಕ್ಷೆಗಳಿಗೆ ರಜೆ ಅನ್ವಯವಿಲ್ಲ

ವಸತಿ ಶಾಲೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ. ಅಲ್ಲದೇ ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಪರೀಕ್ಷೆಗಳು, ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಂದರ್ಶನಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದ್ದು, ಅವುಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಸ್ಪಷ್ಟಪಡಿಸಿದೆ.

ಸಾರ್ವಜನಿಕರಿಗೆ ಎಚ್ಚರಿಕೆ

ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯ ಸಂಚಾರವನ್ನು ತಪ್ಪಿಸಿ, ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಭಾರೀ ಮಳೆ ಹಾಗೂ ಗಾಳಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ.

Must Read