Saturday, August 30, 2025

WEATHER | ರಾಜ್ಯದ ಕರಾವಳಿಗೆ ರೆಡ್ ಅಲರ್ಟ್​, ಉತ್ತರ, ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಾದ್ಯಂತ ಗಣೇಶ ಚತುರ್ಥಿಯ ದಿನದಿಂದಲೇ ಮುಂಗಾರು ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ನೀಡಲಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯಾಗಲಿದೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.ಹಾಸನ, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಗೇರುಸೊಪ್ಪ, ಹೊನ್ನಾವರ, ಅಂಕೋಲಾ, ಮಂಗಳೂರು, ಕಾರವಾರ, ಕದ್ರಾದಲ್ಲಿ ಭಾರಿ ಮಳೆಯಾಗಿದೆ. ಜೇವರ್ಗಿ, ಔರಾದ್, ಆಗುಂಬೆ, ಜೋಯ್ಡಾ, ಯಡ್ರಾಮಿ, ಸುಳ್ಯ, ಸಿದ್ದಾಪುರ, ಶಕ್ತಿನಗರ, ಮಂಕಿ, ಮಾಣಿ, ಕುಮಟಾ, ಕಾರ್ಕಳ, ಬೀದರ್, ಬಂಟವಾಳ, ನಾರಾಯಣಪುರ, ನಲ್ವತವಾಡ, ಉಪ್ಪಿನಂಗಡಿ, ಮೂಡುಬಿದಿರೆ, ಮಂಠಾಳ, ಲೋಂಡಾ, ಕೋಟಾ, ಗದಗ, ಧರ್ಮಸ್ಥಳದಲ್ಲಿ ಮಳೆಯಾಗಿದೆ.

ಇದನ್ನೂ ಓದಿ