ಹೊಸದಿಗಂತ ವರದಿ,ಕಾರವಾರ :
ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜುಲೈ 19 ರಂದು ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.